Breaking
20 Sep 2026, Sun

ಮತ್ತಿಕೆರೆಯಲ್ಲಿ ರಸ್ತೆ ಬಳಿ ನಿಲ್ಲಿಸಿದ್ದ ಕಾರಿನಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿ

ಬೆಂಗಳೂರಿನ ಮತ್ತಿಕೆರೆಯಲ್ಲಿ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಕಾರಿನ ಇಂಜಿನ್ ಬಳಿ, ಬೆಂಕಿ ಕಾಣಿಸಿಕೊಂಡ ಕೂಡಲೇ ಪ್ರಯಾಣಿಕರು ಕಾರಿನಿಂದ ಹೊರಬಂದಿದ್ದಾರೆ. ಬಳಿಕ ಬೆಂಕಿ ಇಡೀ ಕಾರನ್ನ ವ್ಯಾಪಿಸಿ ಕಾರು ಬೆಂಕಿಗೆ ಆಹುತಿಯಾಗಿದೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಯಶವಂತಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು

Leave a Reply