Breaking
10 Feb 2026, Tue

ಜಿಗಣಿಯಲ್ಲಿ ದಿವಂಗತ ಕೆ ಶಿವರಾಮು ರವರ ಮೊದಲನೇ ವರ್ಷದ ಪುಣ್ಯಸ್ಮರಣೆ

ನಿವೃತ್ತ ಐಎಎಸ್ ಅಧಿಕಾರಿ, ಹಾಗೂ ಛಲವಾದಿ ಮಹಾಸಭಾ ಸಂಸ್ಥಾಪಕರಾದ ದಿವಂಗತ ಕೆ ಶಿವರಾಮುರವರ ಮೊದಲನೇ ವರ್ಷದ ಪುಣ್ಯ ಸ್ಮರಣೆ ಹಾಗೂ ನುಡಿನಮನ ಕಾರ್ಯಕ್ರಮವನ್ನ ಜಿಗಣಿಯಲ್ಲಿ ಇಂದು ಆಯೋಜನೆ ಮಾಡಲಾಗಿತ್ತು.

ಛಲವಾದಿ ಮಹಾಸಭಾದ ರಾಜ್ಯ ಘಟಕ ಹಾಗೂ ಜಿಲ್ಲಾ ಘಟಕದ ಪದಾಧಿಕಾರಿಗಳು ಸದಸ್ಯರು ಹಾಗೂ ಶಿವರಾಮು ಅಭಿಮಾನಿಗಳು ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ನುಡಿ ನಮನವನ್ನು ಸಲ್ಲಿಸಿದರು.

ರಾಮನಗರದ ಜಿಲ್ಲೆಯ ಉರಗನಹಳ್ಳಿಯಲ್ಲಿ ಬಡ ಕುಟುಂಬದಲ್ಲಿ ಜನಿಸಿದ ಕೆ ಶಿವರಾಮು ಕನ್ನಡದಲ್ಲಿ ಐಎಎಸ್ ಪರೀಕ್ಷೆ ಬರೆದು ಉತ್ತೀರ್ಣರಾಗಿ ಐಎಎಸ್ ಅಧಿಕಾರಿಯಾಗಿ ಸಮಾಜಮುಖಿ ಕಾರ್ಯಕ್ರಮಗಳನ್ನು ಕೈಗೊಂಡಿದ್ದರು. ಅವರ ಅಗಲಿಕೆಯಿಂದ ಸಾವಿರಾರು ಅಭಿಮಾನಿಗಳು ಹಾಗೂ ಬೆಂಬಲಿಗರಿಗೆ ತುಂಬಲಾರದ ನಷ್ಟವಾಗಿದೆ. ಅವರ ಆಡಳಿತ ಹಾಗೂ ಸೇವೆಯನ್ನ ಗುರುತಿಸಿ ರಾಜ್ಯ ಸರ್ಕಾರ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂದು ಛಲವಾದಿ ಮಹಾಸಭಾ ವತಿಯಿಂದ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡಲಾಯಿತು

Leave a Reply