Breaking
20 Sep 2026, Sun

ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕನ್ನಡ ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು,

ಬೆಂಗಳೂರಿನ ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕನ್ನಡ ಹೋರಾಟಗಾರರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಳಗಾವಿಯಲ್ಲಿ ಮರಾಠಿಗರ ದೌರ್ಜನ್ಯ ಖಂಡಿಸಿ ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ಇಂದು ರಾಜ್ಯಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಲಾಯಿತು ಆದರೆ ಪೊಲೀಸರು ಕನ್ನಡ ಹೋರಾಟಗಾರರನ್ನ ತಡೆದು ವಶಕ್ಕೆ ಪಡೆದರು. ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ಮರಾಠಿಗರು ದಬ್ಬಾಳಿಕೆ ನಡೆಸುತ್ತಿದ್ದರೂ ರಾಜ್ಯ ಸರ್ಕಾರ ಯಾವುದೇ ಕಠಿಣ ಕ್ರಮ ಜರುಗಿಸುತ್ತಿಲ್ಲ ಎಂದು ಕನ್ನಡ ಹೋರಾಟಗಾರರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು

Leave a Reply