ಆನೇಕಲ್ ಪಟ್ಟಣದ ವೀವರ್ಸ್ ಕಾಲೋನಿ ಮುಖ್ಯ ರಸ್ತೆಯಲ್ಲಿರುವ ಹಳ್ಳಿ ಕೈ ರುಚಿ ಹೋಟೆಲ್ ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕ ಸೃಷ್ಟಿಸಿತ್ತು. ಹೋಟೆಲ್ ಮುಂಬಾಗ ಬೆಂಕಿ ಕಾಣಿಸಿಕೊಂಡ ಪರಿಣಾಮ ಸ್ಥಳೀಯರು ಅಗ್ನಿಶಾಮಕದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

