Breaking
20 Sep 2026, Sun

ಮರಾಠಿಗರ ದೌರ್ಜನ್ಯ ಖಂಡಿಸಿ ಕರ್ನಾಟಕ ತಮಿಳುನಾಡ ಗಡಿಭಾಗದಲ್ಲಿ ಪ್ರತಿಭಟನೆ

ಬೆಳಗಾವಿಯಲ್ಲಿ ಮರಾಠಿಗರ ದೌರ್ಜನ್ಯ ಖಂಡಿಸಿ ರಾಜ್ಯದ ಗಡಿಭಾಗ ಅತ್ತಿಬೆಲೆಯಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಗಡಿ ಭಾಗಕ್ಕೆ ಆಗಮಿಸಿದ ಕನ್ನಡ ಹೋರಾಟಗಾರರು ಗಡಿಯನ್ನು ಬಂದ್ ಮಾಡಲು ಯತ್ನಿಸಿದರು. ಈ ವೇಳೆ ಪೊಲೀಸರು ಹೋರಾಟಗಾರರನ್ನ ವಶಕ್ಕೆ ಪಡೆದರು ಇತ್ತೀಚೆಗೆ ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ಮರಾಠಿಗರು ದಬ್ಬಾಳಿಕೆ ನಡೆಸುತ್ತಿದ್ದಾರೆ, ಆದರೂ ರಾಜ್ಯ ಸರ್ಕಾರ ಮರಾಠಿಗರ ವಿರುದ್ಧ ಯಾವುದೇ ಕಠಿಣ ಕ್ರಮ ಜರುಗಿಸುತ್ತಿಲ್ಲ ಹೀಗಾಗಿ ಇಂದು ಅತ್ತಿಬೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕನ್ನಡ ಹೋರಾಟಗಾರರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು.

Leave a Reply