Breaking
20 Sep 2026, Sun

ಮಲ್ಲಿಕಾರ್ಜುನ ದುರ್ಗಾ ಬಳಿ ಜಲ್ಲಿಕಟ್ಟು ಕ್ರೀಡೆ ವೇಳೆ ಅವಘಡ

ಕರ್ನಾಟಕ ತಮಿಳುನಾಡು ಗಡಿ ಭಾಗದ ಮಲ್ಲಿಕಾರ್ಜುನ ದುರ್ಗ ಗ್ರಾಮದಲ್ಲಿ ಆಯೋಜನೆ ಮಾಡಿದ್ದ ಜಲ್ಲಿಕಟ್ಟು ಕ್ರೀಡೆಯಲ್ಲಿ ಅವಘಡವೊಂದು ಸಂಭವಿಸಿದೆ. ವೇಗವಾಗಿ ಬಂದ ಹೋರಿ ಒಂದು ಜನರ ಮೇಲೆ ನುಗ್ಗಿದ ಪರಿಣಾಮ 30ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಕೈಗೊಂಡ ಯುವಕರನ್ನ ಸ್ಥಳೀಯ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಯಾವುದೇ ಮುನ್ನೆಚ್ಚರಿಕೆ ಕ್ರಮ ವಹಿಸದೇ ಜಲ್ಲಿಕಟ್ಟು ಕ್ರೀಡೆ ನಡೆಸಿದ ಪರಿಣಾಮ ಅವಘಡ ಸಂಭವಿಸಿದ್ದು ಆಯೋಜಕರ ವಿರುದ್ಧ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ

Leave a Reply