Breaking
10 Feb 2026, Tue

ಬಳ್ಳೂರು ಗ್ರಾಮ ಪಂಚಾಯಿತಿಯ ನೂತನ ಉಪಾಧ್ಯಕ್ಷರಾಗಿ ಮಂಜುನಾಥ್ ಆಯ್ಕೆ

ಆನೇಕಲ್ ತಾಲೂಕಿನ ಬಳ್ಳೂರು ಗ್ರಾಮ ಪಂಚಾಯಿತಿಯ ನೂತನ ಉಪಾಧ್ಯಕ್ಷರಾಗಿ ಮಂಜುನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ನಡೆದ ಚುನಾವಣೆಯಲ್ಲಿ ನೂತನ ಉಪಾಧ್ಯಕ್ಷರನ್ನ ಸರ್ವ ಸದಸ್ಯರು ಅವಿರೋಧವಾಗಿ ಆಯ್ಕೆ ಮಾಡಿದರು. ಇದೇ ವೇಳೆ ಮಾತನಾಡಿದ ನೂತನ ಉಪಾಧ್ಯಕ್ಷರಾದ ಮಂಜುನಾಥ್ ಅವಿರೋಧವಾಗಿ ಆಯ್ಕೆ ಮಾಡಿದ ಸದಸ್ಯರಿಗೆ ಧನ್ಯವಾದ ಅರ್ಪಿಸಿದರು. ಜೊತೆಗೆ ಗ್ರಾಮ ಪಂಚಾಯಿತಿಯನ್ನು ಮಾದರಿ ಪಂಚಾಯಿತಿಯಾಗಿ ಮಾಡಲು ಪ್ರಾಮಾಣಿಕವಾಗಿ ಕೆಲಸ ಮಾಡುವುದಾಗಿ ಇದೇ ವೇಳೆ ತಿಳಿಸಿದರು.

Leave a Reply