Breaking
17 Jul 2026, Fri

ಜೆಪಿ ನಗರದ 9 ನೇ ಹಂತದಲ್ಲಿ ಗೋದಾಮಿನಲ್ಲಿ ಆಕಸ್ಮಿಕ ಬೆಂಕಿ, ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿ

ಬೆಂಗಳೂರಿನ ಜೆಪಿ ನಗರದ 9ನೇ ಹಂತದಲ್ಲಿರುವ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ. ಮೊದಲು ಸಣ್ಣ ಪ್ರಮಾಣದಲ್ಲಿ ಕಾಣಿಸಿಕೊಂಡ ಬೆಂಕಿ ಬಳಿಕ ಇಡೀ ಗೋದಾಮು ವ್ಯಾಪಿಸಿದೆ. ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಂಕಿ ಅವಘಡದಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.

Leave a Reply