Breaking
20 Sep 2026, Sun

ಸಮಂದೂರು ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಪ್ರಮೀಳಾ ಮುನಿರಾಜು ಆಯ್ಕೆ,

ಆನೇಕಲ್‌ ತಾಲೂಕಿನ ಸಮಂದೂರು ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಪ್ರಮೀಳಾ ಮುನಿರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ನಡೆದ ಚುನಾವಣೆಯಲ್ಲಿ ಸರ್ವ ಸದಸ್ಯರು ನೂತನ ಅಧ್ಯಕ್ಷರನ್ನ ಆಯ್ಕೆ ಮಾಡಿದರು. ಪಂಚಾಯತಿ ಸದಸ್ಯರು ಹಾಗೂ ಗ್ರಾಮಸ್ಥರು ಅಧ್ಯಕ್ಷರಿಗೆ ಶುಭಾಶಯ ಕೋರಿದರು. ಈ ಬಗ್ಗೆ ಮಾತನಾಡಿದ ನೂತನ ಅಧ್ಯಕ್ಷರಾದ ಪ್ರಮೀಳಾ ಅವಿರೋಧವಾಗಿ ಆಯ್ಕೆ ಮಾಡಿದ ಪಂಚಾಯತಿ ಸದಸ್ಯರಿಗೆ ಧನ್ಯವಾದ ಅರ್ಪಿಸಿದರು ಜೊತೆಗೆ ಎಲ್ಲಾ ಸದಸ್ಯರ ಸಹಕಾರದೊಂದಿಗೆ ಗ್ರಾಮ ಪಂಚಾಯಿತಿಯನ್ನು ಮಾದರಿ ಪಂಚಾಯಿತಿಯಾಗಿ ಮಾಡುವುದಾಗಿ ಭರವಸೆ ನೀಡಿದರು.

Leave a Reply