Breaking
31 Mar 2026, Tue

ಮುತ್ತಗಟ್ಟಿ ಗ್ರಾಮದ ಸರ್ಕಾರಿ ಗೋಮಾಳದಲ್ಲಿ ನಿರ್ಮಾಣವಾಗುತ್ತಿದ್ದ ದೇವಾಲಯದ ಕಟ್ಟಡ ತೆರವು

ಆನೇಕಲ್ ತಾಲೂಕಿನ ಮುತ್ತಗಟ್ಟಿ ಗ್ರಾಮದಲ್ಲಿ ಅಕ್ರಮವಾಗಿ ಸರ್ಕಾರಿ ಜಾಗದಲ್ಲಿ ನಿರ್ಮಾಣವಾಗುತ್ತಿದ್ದ ಅಯ್ಯಪ್ಪ ಸ್ವಾಮಿ ದೇವಾಲಯವನ್ನ ಕಂದಾಯ ಇಲಾಖೆಯ ಅಧಿಕಾರಿಗಳು ತೆರೆವು ಮಾಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಕಂದಾಯ ಅಧಿಕಾರಿಗಳು ದೇವಾಲಯವನ್ನು ತೆರವುಗೊಳಿಸಿದ್ದಾರೆ. ಮುತ್ತಗಟ್ಟಿ ಗ್ರಾಮದ ಸರ್ವೇ ನಂಬರ್ 73 ರಲ್ಲಿ ಅಯ್ಯಪ್ಪ ಸ್ವಾಮಿ ದೇವಾಲಯವನ್ನು ನಿರ್ಮಾಣ ಮಾಡಲಾಗುತ್ತಿತ್ತು ಈ ಬಗ್ಗೆ ಸಾರ್ವಜನಿಕರು ಕಂದಾಯ ಇಲಾಖೆಯ ಅಧಿಕಾರಿಗಳಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಕಂದಾಯ ಇಲಾಖೆಯ ಅಧಿಕಾರಿಗಳು ಸರ್ಕಾರಿ ಗೋಮಾಳದಲ್ಲಿ ನಿರ್ಮಿಸಲಾಗುತ್ತಿದ್ದ ದೇವಾಲಯದ ಕಟ್ಟಡವನ್ನು ತೆರವುಗೊಳಿಸಿದ್ದಾರೆ.

Leave a Reply