ಆನೇಕಲ್ ತಾಲೂಕಿನ ರಾಮಸಾಗರ ಗ್ರಾಮದಲ್ಲಿ ಎಸ್‌ಟಿಪಿ ಘಟಕ ನಿರ್ಮಾಣ ಮಾಡುತಿರುವ ಕ್ರಮ ವಿರೋಧಿಸಿ ಚಂದಾಪುರ ಪುರಸಭೆ ಮುಂಭಾಗ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ರಾಮಸಾಗರ ಗ್ರಾಮದ ಸರ್ವೆ ನಂ 111 ರಲ್ಲಿ 3 ಎಕರೆ ಜಾಗದಲ್ಲಿ ಹೆಬ್ಬಗೋಡಿ ನಗರಸಭೆ ವತಿಯಿಂದ ಎಸ್‌ಟಿಪಿ ಘಟಕ ನಿರ್ಮಾಣ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಹೀಗಾಗಿ ಸುತ್ತಮುತ್ತಲ ಗ್ರಾಮಸ್ಥರು ಎಸ್‌ಟಿಪಿ ಘಟಕ ನಿರ್ಮಾಣ ಮಾಡಿದಂತೆ ಪುರಸಭೆಯ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಎಸ್‌ಟಿಪಿ ಘಟಕ ನಿರ್ಮಾಣ ಮಾಡುವುದರಿಂದ ಸುತ್ತಮುತ್ತಲಿನ ವಾತಾವರಣ ಕಲುಷಿತವಾಗಲಿದ್ದು ಎಸ್‌ಟಿಪಿ ಘಟಕ ಸ್ಥಳಾಂತರ ಮಾಡುವಂತೆ ಅಗ್ರಹಿಸಿದರು.

