Breaking
18 May 2026, Mon

ಹೊಂಗಸಂದ್ರದ ಆದರ್ಶ ಬಡಾವಣೆಯಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಹೊಂಗಸಂದ್ರ ಸಮೀಪವಿರುವ ಆದರ್ಶ ಬಡಾವಣೆಯಲ್ಲಿ ನೂತನವಾಗಿ 50 ಲಕ್ಷ ವೆಚ್ಚದ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಹಾಗೂ ಸ್ಥಳೀಯರು ನೂತನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಆದರ್ಶ ಬಡಾವಣೆಯ 14ನೇ ಅಡ್ಡರಸ್ತೆಯಲ್ಲಿ ಗುಂಡಿಗಳಾಗಿ ವಾಹನ ಸಂಚಾರಕ್ಕೆ ತೊಂದರೆ ಉಂಟಾಗುತ್ತಿತ್ತು ಹೀಗಾಗಿ ಸಾರ್ವಜನಿಕರ ಅನುಕೂಲಕ್ಕಾಗಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಇಂದು ಶಾಸಕರು ಚಾಲನೆ ನೀಡಿದ್ದಾರೆ.

Leave a Reply