ಯಲಹಂಕದಲ್ಲಿ ಬಿಜೆಪಿ ವತಿಯಿಂದ ಹೋಳಿ ಉತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಯೋಜಿಸಲಾಗಿತ್ತು ಯಲಹಂಕ ಶಾಸಕ ವಿಶ್ವನಾಥ್ ಈ ಒಂದು ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಜೊತೆ ಪರಸ್ಪರ ಹೋಳಿ ಆಡುವ ಮೂಲಕ ಸಂಭ್ರಮಾಚರಣೆಯನ್ನು ಯಶಸ್ವಿಯಾಗಿ ಆಚರಿಸಲಾಗಿತ್ತು ಈ ಒಂದು ಹೋಳಿ ಉತ್ಸವಕ್ಕೆ ನೂರಾರು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಹೋಕುಳಿಯನ್ನು ಆಡುವ ಮೂಲಕ ಸಂಭ್ರಮಿಸಿದರು. ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಮಹಿಳಾ ಮೋರ್ಚಾ ಕಾರ್ಯಕರ್ತರು ಸೇರಿದಂತೆ ಹಲವು ಮುಖಂಡರು ಹೋಳಿ ಹಬ್ಬದಲ್ಲಿ ಭಾಗವಹಿಸಿದ್ದರು.

