Breaking
21 Jul 2026, Tue

ಗಾಂಜಾ ಮತ್ತಿನಲ್ಲಿ ಕಾರು ಚಲಾಯಿಸಿ ಅಪಘಾತ, ಮೂವರಿಗೆ ಗಾಯ

ಆನೇಕಲ್ ತಾಲೂಕಿನ ಚಂದಾಪುರ ರಸ್ತೆಯಲ್ಲಿರುವ ಪ್ರತಿಷ್ಠಿತ ಅಲಯನ್ಸ್ ಕಾಲೇಜಿನ ವಿದ್ಯಾರ್ಥಿಗಳಿಂದ ಗಾಂಜಾ ಮತ್ತಿನಲ್ಲಿ ಅಪಘಾತ ಸಂಭವಿಸಿದೆ. ಈ ಒಂದು ಅಪಘಾತದಲ್ಲಿ ಮೂವರು ಸಾರ್ವಜನಿಕರಿಗೆ ಗಂಭೀರ ಗಾಯವಾಗಿದೆ. ಪೊಲೀಸರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ. ಕಾರಿನಲ್ಲಿ ಮಧ್ಯದ ಬಾಟಲಿಗಳು ಸೇರಿದಂತೆ ಮಾದಕ ವಸ್ತುಗಳು ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ ಹೀಗಾಗಿ ಪೊಲೀಸರು ಯುವಕರ ರಕ್ತದ ಮಾದರಿಗಳನ್ನು ರಕ್ತ ಪರೀಕ್ಷೆಗೆ ರವಾನಿಸಿದ್ದಾರೆ. ಅಲಯನ್ಸ್ ಕಾಲೇಜಿನ ವಿದ್ಯಾರ್ಥಿಗಳಿಂದ ಪ್ರತಿ ಬಾರಿಯೂ ಇದೇ ರೀತಿ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ ಹೀಗಾಗಿ ಕಾಲೇಜಿನ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ಹೊರ ಹಾಕಿದರು.

Leave a Reply