Breaking
20 Sep 2026, Sun

ಕರ್ನಾಟಕ ಯುವ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಮಂಜುನಾಥ್ ಗೌಡ ಪದಗ್ರಹಣ

ಬೆಂಗಳೂರಿನ ಅರಮನೆಯ ಮೈದಾನದಲ್ಲಿ ಇಂದು ರಾಜ್ಯ ಯುವ ಕಾಂಗ್ರೆಸ್ ನ ನೂತನ ಅಧ್ಯಕ್ಷರಾದ ಮಂಜುನಾಥ್ ಗೌಡ ರವರ ಪದಗ್ರಹಣ ಕಾರ್ಯಕ್ರಮ ಅದ್ದೂರಿಯಾಗಿ ನಡೆಸಲಾಯಿತು. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾ‌ರ್ ಸೇರಿದಂತೆ ಪಕ್ಷದ ಹಿರಿಯ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈಗಾಗಲೇ ಯುವ ಕಾಂಗ್ರೆಸ್ ನಲ್ಲಿ 25 ಲಕ್ಷ ಸದಸ್ಯರನ್ನು ನೋಂದಣಿ ಮಾಡಿಸಲಾಗಿದೆ. ನೂರು ವರ್ಷ ಪೂರೈಸಿರುವ ಕಾಂಗ್ರೆಸ್‌ ಪಕ್ಷದ ಸಂಘಟನೆಗೆ ಹೆಚ್ಚು ಆದ್ಯತೆ ನೀಡಬೇಕು ಹಾಗೂ ತಾಲೂಕು ಜಿಲ್ಲಾ ಮಟ್ಟದಲ್ಲಿ ಯುವ ಕಾಂಗ್ರೆಸ್ ಗೆ ಮತ್ತಷ್ಟು ಶಕ್ತಿ ನೀಡಬೇಕು ಎಂದು ನೂತನ ಅಧ್ಯಕ್ಷರಿಗೆ ಕಿವಿಮಾತು ಹೇಳಿದರು.

Leave a Reply