Breaking
20 Sep 2026, Sun

ಬನ್ನೇರುಘಟ್ಟ ಅರಣ್ಯದಲ್ಲಿ ಫಾರೆಸ್ಟ್ ವಾಚರ್‌ ಅನುಮಾನಸ್ಪದ ಸಾವು, ಬನ್ನೇರುಘಟ್ಟ ಪೊಲೀಸರಿಂದ ಪರಿಶೀಲನೆ

ಆನೇಕಲ್‌ ತಾಲೂಕಿನ ಬನ್ನೇರುಘಟ್ಟ ಅರಣ್ಯ ಪ್ರದೇಶದಲ್ಲಿ ಫಾರೆಸ್ಟ್ ವಾಚರ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಬನ್ನೇರುಘಟ್ಟ ಸಮೀಪದ ಸುವರ್ಣಮುಖಿ ಸಮೀಪ ಅರಣ್ಯದಲ್ಲಿ ಮೃತದೇಹ ಪತ್ತೆಯಾಗಿದ್ದು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. 50 ವರ್ಷದ ಮಹದೇವಯ್ಯ ಸಾವನ್ನಪ್ಪಿರುವ ವಾಚರ್, ಇಂದು ಬೆಳಗ್ಗೆ ಎಂದಿನಂತೆ ಕರ್ತವ್ಯಕ್ಕೆ ತೆರಳಿದ್ದ ಮಹಾದೇವಯ್ಯ ಮೃತ ದೇಹ ಅರಣ್ಯದಲ್ಲಿ ಪತ್ತೆಯಾಗಿರುವುದು ಪೊಲೀಸರ ಅನುಮಾನಕ್ಕೆ ಕಾರಣವಾಗಿದೆ. ಬನ್ನೇರುಘಟ್ಟ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Leave a Reply