Breaking
17 Jul 2026, Fri

ತರಬೇತಿ ಮತ್ತು ಸಂಶೋಧನಾ ಸಂಸ್ಥೆಯ ವತಿಯಿಂದ ಪದವೀಧರರಿಗೆ ಪ್ರಮಾಣ ಪತ್ರ ವಿತರಣೆ

ಶಿಕ್ಷಕರು ತಂತ್ರಜ್ಞಾನಕ್ಕಿಂತ ಸ್ವಅನುಭವ, ಸೃಜನಶೀಲತೆಗೆ ಹೆಚ್ಚು ಒತ್ತುಕೊಡುವ ಮೂಲಕ ಹೊಸ ಆವಿಷ್ಕಾರಗಳತ್ತ ಮುಖ ಮಾಡಬೇಕಿದೆ ಎಂದು ಇಂಡಸ್ ಟ್ರಸ್ಟ್‌ ಸಿಇಒ ಅರ್ಜುನ್ ರಾಯ್ ಅಭಿಪ್ರಾಯಪಟ್ಟಿದ್ದಾರೆ

ಆನೇಕಲ್ ತಾಲ್ಲೂಕಿನ ಬಿಲ್ಲಾಪುರ ಸಮೀಪದ ಇಂಡಸ್ ತರಬೇತಿ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಆಯೋಜಿಸಿದ್ದ ಅಂತಾ ರಾಷ್ಟೀಯ ಶಿಕ್ಷಣ ಸ್ನಾತಕೋತ್ತರ ಡಿಪ್ಲೋಮಾ ಮತ್ತು ಕೇಂಬ್ರಿಡ್ಜ್ ಅಂತಾರಾಷ್ಟ್ರೀಯ ಡಿಪ್ಲೋಮಾ ಪದವಿಧರರಿಗೆ ಪ್ರಮಾಣಪತ್ರವನ್ನು ವಿತರಿಸಿ ಅವರು ಮಾತನಾಡಿದರು.

ಆಧುನಿಕ ತಂತ್ರಜ್ಞಾನ ಎಷ್ಟೇ ಮುಂದುವರೆದಿದ್ದರೂ ಮಾನವನ ಸೃಜನಶೀಲತೆಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಅದಕ್ಕೆ ಹೆಚ್ಚಿನ ಆದ್ಯತೆ ಕೊಟ್ಟು ಪ್ರತಿಯೊಬ್ಬರಲ್ಲಿರೂ ಪ್ರತಿಭೆಯನ್ನು ಗುರುತಿಸಿ, ಅದನ್ನು ಮುನ್ನೆಲೆಗೆ ತರಬೇಕಾದ ಅಗತ್ಯವಿದೆ. ಅದಕ್ಕಾಗಿ ಸೂಕ್ತವಾದ ತರಬೇತಿ ನೀಡುವ ನಿಟ್ಟಿನಲ್ಲಿ ಇಂಡಸ್ ತರಬೇತಿ ಮತ್ತು ಸಂಶೋಧನಾ ಸಂಸ್ಥೆ ವಿಶೇಷ ಕಲಿಕಾ ಚಟುವಟಿಕೆಗಳನ್ನು ರೂಪಿಸಿದೆ ಎಂದು ಅವರು ಹೇಳಿದರು.

ಶಿಕ್ಷಣ ತಜ್ಞ ಡಾ.ಲಲಿತ್ ಪ್ರಸಾದ್ ಮಾತನಾಡಿ, ಇಂಡಸ್ ತರಬೇತಿ ಮತ್ತು ಸಂಶೋಧನಾ ಸಂಸ್ಥೆಯು ಕಳೆದ ನಾಲ್ಕು ವರ್ಷಗಳಲ್ಲಿ ಸುಮಾರು 900ಕ್ಕೂ ಶಿಕ್ಷಕರಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಶೇಷ ತರಬೇತಿ ನೀಡಿದೆ. ವಿದ್ಯಾರ್ಥಿಗಳನ್ನು ಸಶಕ್ತವಾಗಿ ರೂಪಿಸಬೇಕಾದರೆ, ಶಿಕ್ಷಕರ ಗುಣಮಟ್ಟ ಅತ್ಯುತ್ತಮವಾಗಿರಬೇಕಾಗುತ್ತದೆಆ ನಿಟ್ಟಿನಲ್ಲಿ ಇಂಡಸ್ ಸಂಸ್ಥೆಯು ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಶಿಕ್ಷಕರಿಗೆ ವಿಶೇಷ ತರಬೇತಿಯನ್ನು ನೀಡಲಾಗುತ್ತಿದೆ ಎಂದು ಅವರು ಹೇಳಿದರು.

ಈ ವೇಳೆ 425 ವಿದ್ಯಾರ್ಥಿಗಳಿಗೆ ಅಂತಾರಾಷ್ಟ್ರೀಯ ಶಿಕ್ಷಣ ಸ್ನಾತಕೋತ್ತರ ಡಿಪ್ಲೋಮಾ ಮತ್ತು ಕೇಂಬ್ರಿಡ್ಜ್ ಅಂತಾರಾಷ್ಟ್ರೀಯ ಡಿಪ್ಲೋಮಾ ಪದವಿಪತ್ರಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಇಂಡಸ್ ಅಂತಾರಾಷ್ಟ್ರೀಯ ಶಾಲೆಯ ಪ್ರಾಂಶುಪಾಲೆ ಸರೋಜಿನಿ ರಾವ್, ಇಂಗ್ಲೆಂಡ್‌ನ ಶಿಕ್ಷಣ ತಜ್ಞ ಪ್ರೊ.ಸಿಮೊನ್ ಸ್ಪೆನ್ಸರ್, ಕ್ರಿಸ್ಟಿಫರ್ ಬೊಲ್ಟನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply