ಮಾರ್ಚ್ 22ರಂದು ಕನ್ನಡ ಒಕ್ಕೂಟಗಳ ಕರೆ ನೀಡಿರುವ ಕರ್ನಾಟಕ ಬಂದ್ ಗೆ ಸರ್ಕಾರದ ಬೆಂಬಲವಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ವಿಧಾನ ಪರಿಷತ್ ನಲ್ಲಿ ಈ ಕುರಿತು ಮಾತನಾಡಿದರು. ಮಾರ್ಚ್ 22 ರಂದು ವಿಶ್ವ ಜಲ ದಿನ ಇರುವುದರಿಂದ ವಿಶ್ವ ಜಲ ದಿನ ಆಚರಿಸುವುದಕ್ಕೆ ಸರ್ಕಾರದ ವತಿಯಿಂದ ಸಕಲ ಸಿದ್ಧತೆಗಳು ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ. ಮಾರ್ಚ್ 22ರಂದು ಕನ್ನಡ ಒಕ್ಕೂಟಗಳು ಸರ್ಕಾರಕ್ಕೆ ತಿಳಿಸದೆ ಕರೆ ನೀಡಿರುವ ಕರ್ನಾಟಕ ಬಂದ್ ಗೆ ನಾವು ಬೆಂಬಲ ನೀಡುವುದಿಲ್ಲ ಎಂದು ಡಿಸಿಎಂ ತಿಳಿಸಿದ್ದಾರೆ

