Breaking
20 Sep 2026, Sun

ಆನೇಕಲ್ ನಲ್ಲಿ ಕರವೇ ಕಾರ್ಯಕರ್ತರಿಂದ ಪ್ರತಿಭಟನೆ

ಆನೇಕಲ್ ನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರಿಂದ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಆನೇಕಲ್‌ ಬಸ್‌ ನಿಲ್ದಾಣದ ಮುಂಭಾಗ ಬೃಹತ್ ಪ್ರತಿಭಟನೆಯನ್ನು ನಡೆಸಿದರು.

ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದ ವತಿಯಿಂದ ಈ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಎಂಇಎಸ್‌ ವಿರುದ್ಧ ಹೋರಾಟಗಾರರು ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಎಂಇಎಸ್ ಪುಂಡರ ಹಾವಳಿ ಹೆಚ್ಚಾಗಿದೆ ಬೆಳಗಾವಿಯಲ್ಲಿ ಕನ್ನಡಿಗರಿಗೆ ಮರಾಠಿಗರಿಂದ ಆಗುತ್ತಿರುವ ದಬ್ಬಾಳಿಕೆಯ ವಿರುದ್ಧ ರಾಜ್ಯ ಸರ್ಕಾರ ಮರಾಠಿಗರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಅರೆ ಬೆತ್ತಲಾಗಿ ಪ್ರತಿಭಟನೆಯನ್ನು ನಡೆಸಿದರು.ಇದೇ ವೇಳೆ ಪೊಲೀಸರು ಕನ್ನಡಪರ ಹೋರಾಟಗಾರರನ್ನು ವಶಕ್ಕೆ ಪಡೆದುಕೊಂಡರು.

Leave a Reply