Breaking
20 Sep 2026, Sun

ಅತ್ತಿಬೆಲೆ ಗಡಿಯಲ್ಲಿ ಕನ್ನಡ ಜಾಗೃತಿ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ

ಆನೇಕಲ್ ತಾಲೂಕಿನ ಅತ್ತಿಬೆಲೆ ಗಡಿಭಾಗದಲ್ಲಿ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಕನ್ನಡ ಜಾಗೃತಿ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.

ಕನ್ನಡ ಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ಮಂಜುನಾಥ್ ದೇವ ರವರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಸಲಾಯಿತು. ಕನ್ನಡಪರ ಹೋರಾಟಗಾರರು ಹೆದ್ದಾರಿಯನ್ನು ತಡೆಯಲು ಪ್ರಯತ್ನಿಸಿದರು ಇದೇ ವೇಳೆ ಅತ್ತಿಬೆಲೆ ಪೊಲೀಸರು ಕಾರ್ಯಕರ್ತರನ್ನ ವಶಕ್ಕೆ ಪಡೆದುಕೊಂಡರು.

ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ಮರಾಠಿಗರ ದಬ್ಬಾಳಿಕೆಯ ವಿರುದ್ಧ ಕರ್ನಾಟಕ ಬಂದ್ ಹಮ್ಮಿಕೊಂಡಿದ್ದು ಮರಾಠಿಗರ ವಿರುದ್ಧ ಕ್ರಮ ಜರುಗಿಸುವಂತೆ ಕಜಾವೇ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು.

Leave a Reply