Breaking
22 Jul 2026, Wed

ಹುಸ್ಕೂರು ಮದ್ದೂರಮ್ಮ ಜಾತ್ರೆಯಲ್ಲಿ ತೇರುಗಳ ಪಲ್ಟಿ ಪ್ರಕರಣ, ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವು

ಆನೇಕಲ್‌ ತಾಲೂಕಿನ ಹುಸ್ಕೂರಿನ ಮದ್ದೂರಮ್ಮ ಜಾತ್ರೆಯಲ್ಲಿ ತೇರುಗಳ ಪಲ್ಟಿ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಜ್ಯೋತಿ ಎಂಬ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ. ಮದ್ದೂರಮ್ಮ ಜಾತ್ರೆಯಲ್ಲಿ ಸಮೋಸ ಮಾರಾಟ ಮಾಡಲು ಬಂದಿದ್ದ ಮಹಿಳೆ ತೇರು ನೆಲಕ್ಕೆ ಅಪ್ಪಳಿಸಿದ ಸಮಯದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಕೂಡಲೇ ಜ್ಯೋತಿರವರನ್ನ ಸ್ಥಳಿಯ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೆ ಜ್ಯೋತಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply