Breaking
29 Mar 2026, Sun

ನಾಗನಾಯಕನಹಳ್ಳಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ವ್ಯಕ್ತಿ ಸಾವು

ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲೇ ಸಾವನ್ನಪ್ಪಿದ್ದಾನೆ. ಆನೇಕಲ್ ತಾಲೂಕಿನ ನಾಗನಾಯಕನಹಳ್ಳಿ ಗ್ರಾಮದಲ್ಲಿ ಇಂದು ಘಟನೆ ನಡೆದಿದೆ. ನಾಗನಾಯಕನಹಳ್ಳಿ ನಿವಾಸಿ ಮುನಿ ವೆಂಕಟಪ್ಪ ಮೃತ ದುರ್ದೈವಿ. ತನ್ನ ತೋಟದಲ್ಲಿ ಕೆಲಸ ಮಾಡಿಕೊಂಡು ಕಸವನ್ನ ಬಿಸಾಡಲು ಹೋದ ಸಮಯದಲ್ಲಿ ವಿದ್ಯುತ್‌ ತಂತಿ ತುಳಿದು ಶಾಕ್ ಹೊಡೆದಿದೆ ಪರಿಣಾಮ ಮುನಿ ವೆಂಕಟಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಸೂರ್ಯ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply