Breaking
20 Sep 2026, Sun

ಉತ್ತರಹಳ್ಳಿಯ ಸ್ಪೂರ್ತಿ ಬಡಾವಣೆಯಲ್ಲಿ ನೂತನ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಕೃಷ್ಣಪ್ಪ

ಬೆಂ. ದಕ್ಷಿಣ ವಿಧಾನಸಭಾ ಕ್ಷೇತ್ರದ ಸ್ಫೂರ್ತಿ ಬಡಾವಣೆಯಲ್ಲಿ ನೂತನವಾಗಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಶಾಸಕ ಕೃಷ್ಣಪ್ಪ ಹಾಗೂ ಬಡಾವಣೆ ನಿವಾಸಿಗಳ ಸಮ್ಮುಖದಲ್ಲಿ ನೂತನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು. ಬಡಾವಣೆಯಲ್ಲಿ ಇತ್ತೀಚೆಗೆ ರಸ್ತೆಗಳು ಗುಂಡಿಮಯವಾಗಿ ವಾಹನ ಸಂಚಾರಕ್ಕೆ ತೊಂದರೆ ಉಂಟಾಗುತ್ತಿತ್ತು. ಹೀಗಾಗಿ ಸಾರ್ವಜನಿಕರ ಅನುಕೂಲಕ್ಕಾಗಿ 60 ಲಕ್ಷ ವೆಚ್ಚದಲ್ಲಿ ನೂತನ ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಾಸಕರ ನೇತೃತ್ವದಲ್ಲಿ ಇಂದು ಚಾಲನೆ ನೀಡಲಾಗಿದೆ.

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply