ಆನೇಕಲ್ ತಾಲೂಕಿನ ಹುಸ್ಕೂರು ಗ್ರಾಮದ ಐತಿಹಾಸಿಕ ಮದ್ದೂರಮ್ಮ ಜಾತ್ರೆಯಲ್ಲಿ ತೇರು ಪಲ್ಟಿಯಾದ ಸಮಯದಲ್ಲಿ ಗಾಯಗೊಂಡಿದ್ದ ಗಾಯಾಳುಗಳನ್ನು ಶಾಸಕ ಕೃಷ್ಣಪ್ಪ ಭೇಟಿ ಮಾಡಿ ಯೋಗ ಕ್ಷೇಮಕೇಮ ವಿಚಾರಿಸಿದರು. ತೇರು ಪಲ್ಟಿಯಾದ ವೇಳೆ ಇಬ್ಬರು ಸಾವನ್ನಪ್ಪಿದ್ದು ನಾಲ್ಕು ಮಂದಿಗೆ ಗಾಯವಾಗಿತ್ತು. ಹೀಗಾಗಿ ಎಲೆಕ್ಟ್ರಾನಿಕ್ ಸಿಟಿ ಸಮೀಪವಿರುವ ಕಾವೇರಿ ಆಸ್ಪತ್ರೆಗೆ ಶಾಸಕರು ಭೇಟಿ ನೀಡಿ ಗಾಯಾಳುಗಳ ಪರಿಸ್ಥಿತಿ ವಿಚಾರಿಸಿದರು. ಜೊತೆಗೆ ಗಾಯಾಳುಗಳ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಭರವಸೆ ನೀಡಿದರು
ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

