Breaking
20 Sep 2026, Sun

ಅಪರಿಚಿತ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಮೋರಿಯಲ್ಲಿ ಪತ್ತೆ..

ಆನೇಕಲ್ ತಾಲೂಕಿನ ಸರ್ಜಾಪುರ ಸಮೀಪದ ಕೋಟೆ ಬೀದಿಯಲ್ಲಿ ಅಪರಿಚಿತ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಮೋರಿಯಲ್ಲಿ ಪತ್ತೆಯಾಗಿದೆ. ಸುಮಾರು 30 ವರ್ಷ ವಯಸ್ಸಿನ ಮಹಿಳೆಯ ಶವ ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದ್ದು ದುಷ್ಕರ್ಮಿಗಳು ಕೊಲೆ ಮಾಡಿ ಮಹಿಳೆಯನ್ನ ಮೋರಿಯಲ್ಲಿ ಎಸೆದು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸರ್ಜಾಪುರ ಪೊಲೀಸರು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Leave a Reply