ಆನೇಕಲ್ ತಾಲೂಕಿನ ರಾಗಿಹಳ್ಳಿ ಮುಖ್ಯರಸ್ತೆಯ ಪಕ್ಕದಲ್ಲಿ ಒಂಟಿ ಸಲಗವೊಂದು ಪ್ರತ್ಯಕ್ಷವಾಗಿ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.
ಇಂದು ಸಂಜೆ ರಸ್ತೆಯಲ್ಲಿ ಸಾಗುತ್ತಿದ್ದ ಗ್ರಾಮಸ್ಥರು ಒಂಟಿ ಸಲಗ ಬಂದಿರುವುದನ್ನು ನೋಡಿ ಭಯಭೀತರಾಗಿದ್ದಾರೆ.
ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನಕ್ಕೆ ಹೊಂದಿಕೊಂಡಂತೆ ಇರುವ ರಾಗಿಹಳ್ಳಿಯಲ್ಲಿ ಕಾಡಾನೆಗಳು ಹಲವು ಬಾರಿ ರೈತರ ಬೆಳೆ ನಾಶ ಮಾಡಿವೆ.
ಹೀಗಾಗಿ ಅರಣ್ಯ ಇಲಾಖೆ ಕಾಡಾನೆಗಳನ್ನು ಸೂಕ್ತ ರೀತಿಯಲ್ಲಿ ನಿಯಂತ್ರಣ ಮಾಡಿ ರೈತರಿಗೆ ಅನುಕೂಲ ಮಾಡಿಕೊಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

