ಬೆಂಗಳೂರು ಹೊರವಲಯದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ದ್ವಿಚಕ್ರವಾಹನ ಸವಾರನ ಕಾಲು ತುಂಡಾಗಿದೆ.
ವೇಗವಾಗಿ ಬಂದ ಬೈಕ್ ನಿಯಂತ್ರಣ ಕಳೆದುಕೊಂಡು ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಟಿಪ್ಪರ್ ಲಾರಿ ದ್ವಿಚಕ್ರ ವಾಹನ ಸವಾರನ ಕಾಲಿನ ಮೇಲೆ ಹರಿದು ಕಾಲು ಸಂಪೂರ್ಣವಾಗಿ ತುಂಡಾಗಿದೆ.
ಗಾಯಾಳು ವ್ಯಕ್ತಿಯನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

