ಯಲಹಂಕ ವಿಧಾನಸಭಾ ಕ್ಷೇತ್ರದ ರಾಜಾನುಕುಂಟೆಯ ಸಮೀಪವಿರುವ ಎಸ್ ಆರ್ ವಿ ಸಾಯಿ ಗಾರ್ಡನ್ ಬಡಾವಣೆಯಲ್ಲಿ ನೂತನವಾಗಿ 80 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಗಿದೆ.
ಶಾಸಕ ವಿಶ್ವನಾಥ್ ಹಾಗೂ ಬಡಾವಣೆ ನಿವಾಸಿಗಳು ನೂತನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.
ಬಡಾವಣೆಯ ರಸ್ತೆಗಳು ಇತ್ತೀಚೆಗೆ ಸಂಪೂರ್ಣವಾಗಿ ಹಾಳಾಗಿದ್ದ ಹಿನ್ನೆಲೆಯಲ್ಲಿ ನಿವಾಸಿಗಳ ಅನುಕೂಲಕ್ಕಾಗಿ ನೂತನ ಸಿಸಿ ರಸ್ತೆ ಕಾಮಗಾರಿಗೆ ಇಂದು ಶಾಸಕರು ಚಾಲನೆ ನೀಡಿದ್ದಾರೆ.
ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

