ಬೆಂಗಳೂರು ದಕ್ಷಿಣ ವ್ಯಾಪ್ತಿಯ ಹಾರಗದ್ದೆ ವ್ಯವಸಾಯ ಸೇವಾ ಸಹಕಾರ ಸಂಘದ ನಿರ್ದೇಶಕರ ಸ್ಥಾನಕ್ಕೆ ನಡೆದಿದ್ದ ಚುನಾವಣೆಯಲ್ಲಿ 12 ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ
ಫೆಬ್ರವರಿ 6ರಂದು ನಡೆದಿದ್ದ ಚುನಾವಣೆಯ ಫಲಿತಾಂಶ ಇಂದು ಹೊರಬಿದ್ದಿದ್ದು ಇದ್ದ 12 ಸ್ಥಾನಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಈ ಫಲಿತಾಂಶದಿಂದ ಬಿಜೆಪಿ ಪಕ್ಷಕ್ಕೆ ತೀವ್ರ ಮುಜುಗರ ಉಂಟಾಗಿದೆ.
ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಆಶೀರ್ವಾದ ಮಾಡಿದ ಎಲ್ಲಾ ಮತದಾರರಿಗೂ ನೂತನವಾಗಿ ಆಯ್ಕೆಯಾದ ನಿರ್ದೇಶಕರು ಹೃತ್ಪೂರ್ವಕ ಧನ್ಯವಾದ ಅರ್ಪಿಸಿದರು. ಮುಂದೆ ವ್ಯವಸಾಯ ಸೇವಾ ಸಹಕಾರ ಸಂಘವನ್ನ ಇನ್ನಷ್ಟು ಅಭಿವೃದ್ಧಿಪಡಿಸುವುದಾಗಿ ನಿರ್ದೇಶಕರು ಭರವಸೆ ನೀಡಿದರು
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಬಸವರಾಜು, ಹಾಗೂ ನಟರಾಜು ಸೇರಿದಂತೆ ಹಲವು ಹಿರಿಯ ಮುಖಂಡರು ನೂತನ ನಿರ್ದೇಶಕರಿಗೆ ಅಭಿನಂದನೆ ಸಲ್ಲಿಸಿದರು

