Breaking
10 Feb 2026, Tue

ಹುಸ್ಕೂರು ತೇರು ಪಲ್ಟಿ ಪ್ರಕರಣ ಇಬ್ಬರು ಅಧಿಕಾರಿಗಳು ಅಮಾನತು

ಆನೇಕಲ್ ತಾಲೂಕಿನ ಹುಸ್ಕೂರು ಗ್ರಾಮದ ಐತಿಹಾಸಿಕ ಮದ್ದೂರಮ್ಮ ಜಾತ್ರೆಯಲ್ಲಿ ತೇರು ಪಲ್ಟಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಜಿಲ್ಲಾಧಿಕಾರಿಗಳು ಅಮಾನತು ಮಾಡಿದ್ದಾರೆ.

ಹುಸ್ಕೂರು ವೃತ್ತದ ರಾಜ್ಯಸ್ವ ನಿರೀಕ್ಷಕ ಪ್ರಶಾಂತ್ ಹಾಗೂ ಗ್ರಾಮ ಆಡಳಿತ ಅಧಿಕಾರಿ ಕಾರ್ತಿಕ್ ಎಂಬುವವರನ್ನ ಅಮಾನತ್ತು ಮಾಡಿ ಜಿಲ್ಲಾಧಿಕಾರಿ ಜಗದೀಶ್ ಆದೇಶ ಹೊರಡಿಸಿದ್ದಾರೆ.

ಘಟನೆಯಲ್ಲಿ ಇಬ್ಬರು ಅಮಾಯಕರು ಜೀವ ಕಳೆದುಕೊಂಡ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಕ್ರಮ ಜರುಗಿಸಿದ್ದಾರೆ.

ಅಲ್ಲದೇ ಪೊಲೀಸ್ ಅಧಿಕಾರಿಗಳು ಸಹ ಈ ಘಟನೆಯಲ್ಲಿ ಸೂಕ್ತ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿಲ್ಲ ಎಂದು ಬೆಂ.ಗ್ರಾಮಾಂತರ ಎಸ್ಪಿ ಸಿ ಕೆ ಬಾಬಾ ರವರಿಗೆ ದೂರು ನೀಡಿದ್ದು ಪೊಲೀಸ್ ಅಧಿಕಾರಿಗಳ ವಿರುದ್ಧವು ಕ್ರಮ ಜರುಗಿಸಬೇಕೆಂದು ಜಿಲ್ಲಾಧಿಕಾರಿಗಳು ದೂರು ನೀಡಿದ್ದಾರೆ

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply