Breaking
6 Feb 2026, Fri

ಕೆರೆಯಲ್ಲಿ ನಿರ್ಮಾಣವಾಗಿದ್ದ ರಸ್ತೆ ತೆರವು ಮಾಡಿದ ಅತ್ತಿಬೆಲೆ ಪುರಸಭೆ ಅಧಿಕಾರಿಗಳು

ಅತ್ತಿಬೆಲೆಯ ಪಟಾಲಮ್ಮ ಕೆರೆಯಲ್ಲಿ ಅಕ್ರಮವಾಗಿ ಕೆರೆಯನ್ನು ಮುಚ್ಚಿ ರಸ್ತೆ ನಿರ್ಮಾಣ ಮಾಡಿದ್ದ ಹಿನ್ನೆಲೆಯಲ್ಲಿ ಅತ್ತಿಬೆಲೆ ಅಧಿಕಾರಿಗಳು ರಸ್ತೆಯನ್ನ ತೆರವು ಮಾಡಿದ್ದಾರೆ.

ಕೆಲವು ಖಾಸಗಿ ವ್ಯಕ್ತಿಗಳು ಕೆರೆಯನ್ನು ಮುಚ್ಚಿ ಅಕ್ರಮವಾಗಿ ರಸ್ತೆ ನಿರ್ಮಾಣ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕ ಕೆರೆ ಕಟ್ಟೆ ಸಂರಕ್ಷಣಾ ಸಮಿತಿ ವತಿಯಿಂದ ಅಧಿಕಾರಿಗಳಿಗೆ ದೂರು ನೀಡಲಾಗಿತ್ತು.

ಹೀಗಾಗಿ ಅತ್ತಿಬೆಲೆ ಪುರಸಭೆ ಅಧಿಕಾರಿಗಳು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಚರಣೆ ನಡೆಸಿ ರಸ್ತೆಯನ್ನು ತೆರವು ಮಾಡಿದ್ದಾರೆ.

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply