Breaking
20 Sep 2026, Sun

ಜಾಲಹಳ್ಳಿಯಲ್ಲಿ ಮನೆ ಮುಂಭಾಗ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳ್ಳತನ, ಕಳ್ಳರ ಕೈಚಳಕ ಸಿಸಿ ಕ್ಯಾಮೆರಾದಲ್ಲಿ ಸೆರೆ

ಜಾಲಹಳ್ಳಿ ಸಮೀಪವಿರುವ ಬಾಹುಬಲಿ ನಗರದಲ್ಲಿ ಮನೆ ಮುಂಭಾಗ ನಿಲ್ಲಿಸಿದ್ದ ದ್ವಿಚಕ್ರವಾಹನವನ್ನು ಕಳ್ಳರು ಕ್ಷಣಮಾತ್ರದಲ್ಲಿ ಕದ್ದು ಪರಾರಿಯಾಗಿದ್ದಾರೆ.

ಮೊದಲು ದ್ವಿಚಕ್ರ ವಾಹನವನ್ನು ಪರಿಶೀಲಿಸಿ ಇಬ್ಬರು ಕಳ್ಳರು ಬಳಿಕ ನಕಲಿ ಕೀ ಬಳಸಿಕೊಂಡು ದ್ವಿಚಕ್ರ ವಾಹನವನ್ನು ಕದ್ದು ಪರಾರಿಯಾಗಿದ್ದಾರೆ.

ಈ ಎಲ್ಲಾ ದೃಶ್ಯಾವಳಿಗಳು ಮನೆಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಸಂಬಂಧ ಜಾಲಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply