Breaking
20 Sep 2026, Sun

ಹೆಬ್ಬಗೋಡಿ ಸಮೀಪದ ಗೊಲ್ಲಹಳ್ಳಿಯಲ್ಲಿ ರೌಡಿಶೀಟ‌ರ್ ನೇಪಾಳಿ ಮಂಜನ ಬರ್ಬರ ಹತ್ಯೆ

ಆನೇಕಲ್‌ ತಾಲೂಕಿನ ಹೆಬ್ಬಗೋಡಿ ಸಮೀಪವಿರುವ ಗೊಲ್ಲಹಳ್ಳಿ ಗ್ರಾಮದಲ್ಲಿ ರೌಡಿಶೀಟ‌ರ್ ನೇಪಾಳಿ ಮಂಜನ ಬರ್ಬರ ಹತ್ಯೆ ನಡೆದಿದೆ.

ಯುಗಾದಿ ಪ್ರಯುಕ್ತ ಪಾರ್ಟಿ ಮಾಡುತ್ತಿದ್ದ ಸಮಯದಲ್ಲಿ ಬೈಕ್ ನಲ್ಲಿ ಬಂದ ಐದು ಜನ ದುಷ್ಕರ್ಮಿಗಳು ನೇಪಾಳಿ ಮಂಜನನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಹಳೆ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 14 ಅಪರಾಧ ಪ್ರಕರಣಗಳಲ್ಲಿ ಮಂಜ ಭಾಗಿಯಾಗಿದ್ದ ಎನ್ನಲಾಗಿದೆ.

ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ ಭೇಟಿ ನೀಡಿ ಪರಿಶೀಲನೆ ನಡೆಸಿದರು

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply