Breaking
3 Feb 2026, Tue

ಬನ್ನೇರುಘಟ್ಟ ಸರ್ಕಲ್ ನಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ, ಇಡೀ ಕಾರು ಸಂಪೂರ್ಣವಾಗಿ ಸುಟ್ಟು ಕರಕಲು

ಆನೇಕಲ್‌ ತಾಲೂಕಿನ ಬನ್ನೇರುಘಟ್ಟ ಸರ್ಕಲ್ ನಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ.

ಇಂದು ಬೆಂಗಳೂರಿನಿಂದ ಬನ್ನೇರುಘಟ್ಟ ಮಾರ್ಗವಾಗಿ ಬರುತ್ತಿದ್ದ ಸ್ವಿಪ್ಟ್ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಾರಿನಲಿದ್ದ ಪ್ರಯಾಣಿಕರು ಕೂಡಲೇ ಕೆಳಗೆ ಇಳಿದಿದ್ದಾರೆ.

ಬಳಿಕ ಬೆಂಕಿ ಇಡಿ ಕಾರನ್ನ ವ್ಯಾಪಿಸಿ ಕಾರು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply