ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಬಿಜೆಪಿ ಪಕ್ಷದಿಂದ ಅಹೋ ರಾತ್ರಿ ಧರಣಿ ಹಮ್ಮಿಕೊಳ್ಳಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ನೇತೃತ್ವದಲ್ಲಿ ಚಾಲನೆ ನೀಡಲಾಯಿತು.
ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನ ಅನುಷ್ಠಾನ ಮಾಡಿ ಜನರ ಜೇಬಿಗೆ ಕತ್ತರಿ ಹಾಕುವ ಕೆಲಸ ಮಾಡುತ್ತಿದೆ. ಇತ್ತೀಚೆಗೆ ದಿನಬಳಕೆ ವಸ್ತುಗಳು ಸೇರಿದಂತೆ ಹಲವು ವಸ್ತುಗಳ ಬೆಲೆ ಗಗನಕ್ಕೆ ಏರುತ್ತಿದೆ
ಮಧ್ಯಮ ವರ್ಗದ ಕುಟುಂಬಗಳಿಗೆ ಇದರಿಂದ ಆರ್ಥಿಕ ಸಂಕಷ್ಟ ಉಂಟಾಗುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ ಕಾರಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ಈ ಬಗ್ಗೆ ಗಮನಹರಿಸಿ ಬೆಲೆ ಏರಿಕೆಯನ್ನು ನಿಯಂತ್ರಿಸಲು ಸೂಕ್ತ ಕ್ರಮಗಳನ್ನು ಅನುಸರಿಸಬೇಕು ಎಂದು ಬಿಜೆಪಿ ಪಕ್ಷದಿಂದ ಒತ್ತಾಯ ಮಾಡಲಾಯಿತು
ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..