Breaking
31 Oct 2025, Fri

ಏಪ್ರಿಲ್‌ 4 ಶುಕ್ರವಾರ ಶ್ರೀ ತಿಮ್ಮರಾಯಸ್ವಾಮಿ ಬ್ರಹ್ಮ ರಥೋತ್ಸವ

ಏಪ್ರಿಲ್‌ 4 ಶುಕ್ರವಾರದಂದು ಆನೇಕಲ್ ಪಟ್ಟಣದ ಆದಿದೈವ ಶ್ರೀ ತಿಮ್ಮರಾಯಸ್ವಾಮಿ ಬ್ರಹ್ಮ ರಥೋತ್ಸವ ನಡೆಸಲು ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ರಥೋತ್ಸವ ಅಂಗವಾಗಿ ಕಲ್ಲಿನ ಚಕ್ರದ ರಥವನ್ನು ಸಿದ್ದಪಡಿಸಿ ರಥಕ್ಕೆ ಅಲಂಕಾರ ಮಾಡಲಾಗಿದೆ.

ಪ್ರತಿ ವರ್ಷ ಚೈತ್ರ ಮಾಸದಲ್ಲಿ ಬರುವ ಶ್ರೀ ತಿಮ್ಮರಾಯಸ್ವಾಮಿ ಬ್ರಹ್ಮ ರಥೋತ್ಸವದಲ್ಲಿ ತಾಲ್ಲೂಕಿನ ವಿವಿಧ ಭಾಗಗಳಿಂದ ಸಾವಿರಾರು ಜನ ಆಗಮಿಸುತ್ತಾರೆ.

ಹೀಗಾಗಿ ಬರುವ ಭಕ್ತಾಧಿಗಳಿಗೆ ಅನುಕೂಲವಾಗಲು ಎಲ್ಲಾ ರೀತಿಯ ಸೌಲಭ್ಯ ಒದಗಿಸಲಾಗಿದೆ. ದೇವಾಲಯದ ಸುತ್ತಮುತ್ತ ಅರವಂಟಿಕೆ ಸಿದ್ದಪಡಿಸಲಾಗಿದ್ದು ವಾಹನ ಓಡಾಟಕ್ಕೆ ಬೇರೆ ವ್ಯವಸ್ಥೆ ಕಲ್ಪಿಸಲಾಗಿದೆ. ಶಾಸಕ ಶಿವಣ್ಣ, ಮಾಜಿ ಕೇಂದ್ರ ಸಚಿವ ನಾರಾಯಣಸ್ವಾಮಿ ಸೇರಿದಂತೆ ಹಲವು ಗಣ್ಯರು ರಥೋತ್ಸವದಲ್ಲಿ ಭಾಗಿಯಾಗಲಿದ್ದಾರೆ‌.

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply