Breaking
20 Sep 2026, Sun

ಬಿಟಿಎಂ ಲೇಔಟ್ 4 ನೇ ಹಂತದಲ್ಲಿ ನೂತನ ಬಿಎಂಟಿಸಿ ಬಸ್ ಸೇವೆಗೆ ಚಾಲನೆ ನೀಡಿದ ಶಾಸಕ ಸತೀಶ್ ರೆಡ್ಡಿ

ಬೆಂಗಳೂರಿನ ಬಿಟಿಎಂ ಲೇಔಟ್ ನಾಲ್ಕನೇ ಹಂತದಲ್ಲಿ ನೂತನವಾಗಿ ಬಿಎಂಟಿಸಿ ಬಸ್‌ ಸೇವೆಗೆ ಶಾಸಕ ಸತೀಶ್‌ ರೆಡ್ಡಿ ಇಂದು ಚಾಲನೆ ನೀಡಿದರು.

ಹಲವು ವರ್ಷಗಳಿಂದ ಈ ಭಾಗದಲ್ಲಿ ಬಿಎಂಟಿಸಿ ಬಸ್‌ ಸಂಪರ್ಕ ಕಲ್ಪಿಸುವಂತೆ ಸ್ಥಳೀಯರು ಹಲವು ಬಾರಿ ಶಾಸಕರಿಗೆ ಮನವಿ ಸಲ್ಲಿಸಿದ್ದರು.

ಹೀಗಾಗಿ ಇಂದು ನೂತನ ಬಸ್‌ ಸೇವೆಗೆ ಶಾಸಕರ ನೇತೃತ್ವದಲ್ಲಿ ಪೂಜೆ ಸಲ್ಲಿಸಿ ಉದ್ಘಾಟನೆ ಮಾಡಲಾಯಿತು. ನಿಕಟ ಪೂರ್ವ ಬಿಬಿಎಂಪಿ ಸದಸ್ಯರು ಸೇರಿದಂತೆ ಹಲವು ನಿವಾಸಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply