ಆನೇಕಲ್ ಪಟ್ಟಣದ ತಿಮ್ಮರಾಯಸ್ವಾಮಿ ದೇವಾಲಯದಲ್ಲಿ ವೈರಮುಡಿ ಉತ್ಸವವನ್ನು ಆಯೋಜಿಸಲಾಗಿತ್ತು. ಆನೇಕಲ್ ನ ಪದ್ಮನಾಭ ರವರ ಕುಟುಂಬದಿಂದ ವೈರಮುಡಿ ಉತ್ಸವವನ್ನು ಆಯೋಜಿಸಲಾಗಿತ್ತು.
ಸಾವಿರಾರು ಭಕ್ತಾದಿಗಳು ಈ ಒಂದು ವೈರಮುಡಿ ಉತ್ಸವವನ್ನು ಕಣ್ತುಂಬಿ ಕೊಂಡರು. ಮೇಲುಕೋಟೆ ಮಾದರಿಯಲ್ಲಿ ವೈರಮುಡಿ ಉತ್ಸವವನ್ನು ಆಯೋಜಿಸಿದ್ದರಿಂದ ಸಾವಿರಾರು ಭಕ್ತಾದಿಗಳು ಈ ಒಂದು ಉತ್ಸವದಲ್ಲಿ ಪಾಲ್ಗೊಂಡಿದ್ದರು.
ಭಕ್ತಾದಿಗಳು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಗೋವಿಂದ ಗೋವಿಂದ ಎಂಬ ನಾಮಸ್ಮರಣೆಯಿಂದ ದೇವರಲ್ಲಿ ಪ್ರಾರ್ಥಿಸಿದರು.
ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

