Breaking
20 Sep 2026, Sun

ಜಿಗಳ ಗ್ರಾಮದಲ್ಲಿ ಶ್ರೀ ರಾಮನವಮಿ ಅಂಗವಾಗಿ ರಾಮದೇವರ ಅದ್ದೂರಿ ಬ್ರಹ್ಮರಥೋತ್ಸವ

ಆನೇಕಲ್‌ ತಾಲೂಕಿನ ಜಿಗಳ ಗ್ರಾಮದಲ್ಲಿ ಶ್ರೀರಾಮನವಮಿ ಅಂಗವಾಗಿ ಶ್ರೀ ರಾಮದೇವರ ಬ್ರಹ್ಮರಥೋತ್ಸವವನ್ನು ವಿಜೃಂಭಣೆಯಿಂದ ನಡೆಸಲಾಯಿತು.

ಅಲಂಕೃತ ರಥದಲ್ಲಿ ಸೀತಾರಾಮನ ಮೂರ್ತಿಯನ್ನ ಕೂರಿಸಿ ಊರಿನ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಯಿತು.

ಮಹಿಳೆಯರು ಶ್ರೀ ರಾಮನ ಮೂರ್ತಿಗೆ ಆರತಿ ಬೆಳಗಿ ತಮ್ಮ ಕೋರಿಕೆಗಳನ್ನ ಈಡೇರಿಸುವಂತೆ ಪ್ರಾರ್ಥಿಸಿದರು. ಗ್ರಾಮಸ್ಥರು ಹಳ್ಳಿಕಾರು ಎತ್ತುಗಳ ಮೆರವಣಿಗೆ ನಡೆಸಿದರು. ವಿವಿಧ ಜಾನಪದ ಕಲಾತಂಡಗಳು ರಥೋತ್ಸವಕ್ಕೆ ಮತ್ತಷ್ಟು ಮೆರಗು ತಂದುಕೊಟ್ಟವು.

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply