Breaking
5 Feb 2026, Thu

ದೊಮ್ಮಸಂದ್ರದಲ್ಲಿ ಮುಖ್ಯರಸ್ತೆ ಪಕ್ಕದಲ್ಲಿ ಅಂಗಡಿ ಇಡದಂತೆ ವ್ಯಾಪಾರಿಗಳಿಗೆ ಸೂಚನೆ

ಅವಧಿ ಮುಗಿದರೂ ಸಂತೆಯಲ್ಲಿ ಸುಂಕ ವಸೂಲಿ ಮಾಡಲು ಯತ್ನಿಸಿದ ಹಿನ್ನೆಲೆಯಲ್ಲಿ ಗುತ್ತಿಗೆದಾರ ಹಾಗೂ ಪಂಚಾಯತಿ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಆನೇಕಲ್ ತಾಲ್ಲೂಕಿನ ದೊಮ್ಮಸಂದ್ರ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂತೆಯಲ್ಲಿ ಸುಂಕ ವಸೂಲಿ ಮಾಡಲು ನಾಗೇಶ್ ಹಾಗೂ ಅಖಿಲ್ ನಂದಾ ಎಂಬುವವರಿಗೆ ಟೆಂಡರ್ ನೀಡಲಾಗಿತ್ತು. ಮಾರ್ಚ್ 31 ಕ್ಕೆ ಈ ವರ್ಷದ ಟೆಂಡರ್ ಅವಧಿ ಮುಗಿದಿದೆ. ಆದರೂ ಅಕ್ರಮವಾಗಿ ಸುಂಕ ವಸೂಲಿ ಮಾಡಲು ಯತ್ನಿಸಿದ ಗುತ್ತಿಗೆದಾರ ಅಖಿಲ್ ನಂದಾ ಹಾಗೂ ನಾಗೇಶ್ ವಿರುದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನರೇಶ್ ಹಾಗೂ ಅಭಿವೃದ್ಧಿ ಅಧಿಕಾರಿ ಮಂಜುನಾಥ್ ರೆಡ್ಡಿ ಆಕ್ರೋಶ ಹೊರ ಹಾಕಿದರು.

ಇಂದು ದೊಮ್ಮಸಂದ್ರ ಮುಖ್ಯ ರಸ್ತೆಯಲ್ಲಿ ಅಂಗಡಿ ಇಡಲು ಬಂದ ವ್ಯಾಪಾರಿಗಳಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಪಿಡಿಓ ಅಂಗಡಿ ಇಡದಂತೆ ಸೂಚನೆ ನೀಡಿದ್ದಾರೆ. ರಸ್ತೆಯಲ್ಲಿ ಅಂಗಡಿ ನಿರ್ಮಾಣ ಮಾಡುವುದರಿಂದ ಪ್ರತಿ ಸೋಮವಾರ ಟ್ರಾಫಿಕ್ ಜಾಮ್ ಉಂಟಾಗಿ ಬಿಎಂಟಿಸಿ ಬಸ್ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ, ಶಾಲಾ ಮಕ್ಕಳು ಹಾಗೂ ಮಹಿಳೆಯರಿಗೆ ಇದರಿಂದ ಅನಾನುಕೂಲ ಉಂಟಾಗುತ್ತಿದ್ದು ದೊಮ್ಮಸಂದ್ರದ ಎಪಿಎಂಸಿ ಮಾರುಕಟ್ಟೆಯಲ್ಲಿ ಸಂತೆಯ ವ್ಯಾಪಾರ ವಹಿವಾಟು ನಡೆಸುವಂತೆ ಸೂಚನೆ ನೀಡಿದರು. ಈ ವೇಳೆ ಗುತ್ತಿಗೆದಾರರು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರ ನಡುವೆ ಮಾತಿನ ಚಕಮಕಿ ಉಂಟಾಯಿತು. ಈ ಬಗ್ಗೆ ಮಾತನಾಡಿದ ಗುತ್ತಿಗೆದಾರ ಅಖಿಲ್ ನಂದ ನಮಗೆ ಹೈಕೊರ್ಟ್ ನಲ್ಲಿ ಕಳೆದ ಮೇ ತಿಂಗಳಲ್ಲಿ ಸಂತೆಯಲ್ಲಿ ಸುಂಕ ವಸೂಲಿ ಮಾಡಲು 23 ಲಕ್ಷ ನೀಡಿ 12 ತಿಂಗಳು ಸುಂಕ ವಸೂಲಿ ಮಾಡಲು ಟೆಂಡರ್ ಪಡೆಯಲಾಗಿದೆ. ಅಲ್ಲದೇ 12 ತಿಂಗಳು ಸುಂಕ ವಸೂಲಿಗೆ ಕೊರ್ಟ್ ನಿಂದ ಸೂಚನೆ ನೀಡಲಾಗಿದೆ. ಆದರೆ ಪಂಚಾಯಿತಿಯಲ್ಲಿ ನಮಗೆ ಸುಂಕ ವಸೂಲಿಗೆ ಅವಕಾಶ ಕಲ್ಪಿಸುತ್ತಿಲ್ಲ. ನಮಗೆ ಇದರಿಂದ ನಷ್ಟವಾಗುತ್ತಿದೆ ಎಂದರು.

ಅವಧಿ ಮೀರಿದ ನಡುವೆಯೂ ಸುಂಕ ವಸೂಲಿ ಮಾಡುತ್ತಿದ್ದ ಗುತ್ತಿಗೆದಾರನಿಗೆ ಪಂಚಾಯಿತಿ ಅಧಿಕಾರಿಗಳು ಇಂದು ಬಿಸಿ‌ಮುಟ್ಟಿಸಿದ್ದಾರೆ. ಇದು ಯಾವ ರೀತಿ ತಾರ್ಕಿಕ ಅಂತ್ಯ ಕಾಣುತ್ತದೆ ಎಂಬುದನ್ನು ಕಾದು ನೋಡಬೇಕು..

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply