Breaking
20 Sep 2026, Sun

ಪಟ್ಟಣದ ಎಪಿಎಂಸಿ ಮಾರುಕಟ್ಟೆಯಲ್ಲಿ 5 ವರ್ಷ ಕಳೆದರೂ ಉದ್ಘಾಟನೆಯಾಗದ ಶೌಚಾಲಯ

ಆನೇಕಲ್‌ ಪಟ್ಟಣದ ಎಪಿಎಂಸಿ ಮಾರುಕಟ್ಟೆ ಪಕ್ಕದಲ್ಲಿ ಕಳೆದ ಐದು ವರ್ಷಗಳ ಹಿಂದೆ ನಿರ್ಮಾಣವಾಗಿದ್ದ ಶೌಚಾಲಯ ಇಂದಿಗೂ ಉದ್ಘಾಟನೆಯಾಗಿಲ್ಲ, ಪರಿಣಾಮ ಮಾರುಕಟ್ಟೆಗೆ ಬರುವ ಮಹಿಳೆಯರು ಹಾಗೂ ವ್ಯಾಪಾರಿಗಳಿಗೆ ಶೌಚಾಲಯವಿಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಪ್ರತಿದಿನ ಮುಂಜಾನೆ ಮೂರು ಗಂಟೆಗೆ ಸಾವಿರಾರು ಮಂದಿ ಮಾರುಕಟ್ಟೆಗೆ ಆಗಮಿಸುತ್ತಾರೆ ಆದರೆ ಶೌಚಾಲಯವಿದ್ದರೂ ಉದ್ಘಾಟನೆಯಾಗದೇ ಶೌಚಾಲಯಕ್ಕೆ ಬೀಗ ಜಡಿಯಲಾಗಿದೆ.

ಹೀಗಾಗಿ ಶೌಚಾಲಯವನ್ನು ಆದಷ್ಟು ಬೇಗ ಉದ್ಘಾಟನೆ ಮಾಡುವಂತೆ ತರಕಾರಿ ವ್ಯಾಪಾರಿ ರಾಕೇಶ್ ಒತ್ತಾಯಿಸಿದ್ದಾರೆ

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply