Breaking
20 Sep 2026, Sun

ಯಲಹಂಕದಲ್ಲಿ ಶ್ರೀ ವೇಣುಗೋಪಾಲಸ್ವಾಮಿ ಅದ್ದೂರಿ ಬ್ರಹ್ಮರಥೋತ್ಸವ, ಶಾಸಕ ವಿಶ್ವನಾಥ್ ಸೇರಿದಂತೆ ಗಣ್ಯರು ಭಾಗಿ

ಯಲಹಂಕ ಸಮೀಪದ ಕೋಟೆ ಬೀದಿಯಲ್ಲಿ ಶ್ರೀ ವೇಣುಗೋಪಾಲಸ್ವಾಮಿ ಬ್ರಹ್ಮರಥೋತ್ಸವ ಇಂದು ವಿಜೃಂಭಣೆಯಿಂದ ನೆರವೇರಿತು.

ಯಲಹಂಕ ಶಾಸಕ ವಿಶ್ವನಾಥ್ ಸೇರಿದಂತೆ ಗಣ್ಯರು ರಥೋತ್ಸವಕ್ಕೆ ಚಾಲನೆ ನೀಡಿದರು. ದೇವರ ಅಲಂಕೃತ ಮೂರ್ತಿಯನ್ನು ರಥದಲ್ಲಿ ಕೂರಿಸಿ ಊರಿನ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಯಿತು.

ಗೋವಿಂದ ಗೋವಿಂದ ನಾಮಸ್ಮರಣೆಯೊಂದಿಗೆ ಭಕ್ತರು ರಥವನ್ನು ಎಳೆದು ಕೋರಿಕೆಗಳನ್ನ ಈಡೇರಿಸುವಂತೆ ದೇವರಲ್ಲಿ ಪ್ರಾರ್ಥಿಸಿದರು. ರಥೋತ್ಸವ ಅಂಗವಾಗಿ ದೇವರ ಮೂಲ ವಿಗ್ರಹಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply