Breaking
20 Sep 2026, Sun

ನಾಗನಾಯಕನಹಳ್ಳಿಯಲ್ಲಿ ಅಂಬೇಡ್ಕ‌ರ್ ಜನ್ಮದಿನಾಚರಣೆ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ರವರ 134ನೇ ಜನ್ಮ ದಿನಾಚರಣೆ ಅಂಗವಾಗಿ ನಾಗನಾಯಕನಹಳ್ಳಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು.

ಅಂಬೇಡ್ಕ‌ರ್ ಯುವಕರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣಾ ಶಿಬಿರವನ್ನು ನ್ಯಾಯಮೂರ್ತಿಗಳಾದ ವಿಜಯ್ ಕುಮಾ‌ರ್ ಉದ್ಘಾಟಿಸಿದರು.

ಮರಸೂರು ಸುತ್ತಮುತ್ತಲ ನೂರಾರು ಮಂದಿ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಿ ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಜೊತೆಗೆ ಹಲವು ಯುವಕರು ರಕ್ತದಾನ ಮಾಡುವ ಮೂಲಕ ರಕ್ತದಾನದ ಬಗ್ಗೆ ಜಾಗೃತಿ ಮೂಡಿಸಿದರು.

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply