Breaking
10 Feb 2026, Tue

ಡೆಂಕಣಿಕೋಟೆ ಗ್ರಾಮದಲ್ಲಿ ಜಲ್ಲಿಕಟ್ಟು ಕ್ರೀಡೆಯಲ್ಲಿ ಭಾಗವಹಿಸಿದ್ದ 20ಕ್ಕೂ ಹೆಚ್ಚು ಯುವಕರಿಗೆ ಗಂಭೀರ ಗಾಯ, ಆಸ್ಪತ್ರೆಗೆ ರವಾನೆ

ಕರ್ನಾಟಕ ತಮಿಳುನಾಡು ಗಡಿಭಾಗದ ಡೆಂಕಣಿಕೋಟೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಜಲ್ಲಿಕಟ್ಟು ಕ್ರೀಡೆಯಲ್ಲಿ ಭಾಗವಹಿಸಿದ್ದ 20ಕ್ಕೂ ಹೆಚ್ಚು ಯುವಕರಿಗೆ ಹೊರಿ ತಿವಿತದಿಂದ ಗಾಯಗಳಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಜಲ್ಲಿಕಟ್ಟು ಸ್ಪರ್ಧೆಯಲ್ಲಿ 20 ಕ್ಕೂ ಹೆಚ್ಚು ಹೋರಿಗಳು ಹಾಗೂ 5 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ಈ ವೇಳೆ ಹೋರಿಗಳು ಅಡ್ಡಾದಿಡ್ಡಿಯಾಗಿ ಬಂದು ಯುವಕರ ಮೇಲೆ ದಾಳಿ ಮಾಡಿದ ಪರಿಣಾಮ 20ಕ್ಕೂ ಹೆಚ್ಚು ಯುವಕರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸೂಕ್ತ ಮುಂಜಾಗ್ರತಾ ಕ್ರಮ ಅನುಸರಿಸದೇ ಕ್ರೀಡೆ ಆಯೋಜನೆ ಮಾಡಿದ ಪರಿಣಾಮ ಅವಘಡ ಸಂಭವಿಸಿದೆ.

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply