Breaking
17 Jul 2026, Fri

ಅತ್ತಿಬೆಲೆ ಸಮೀಪವಿರುವ ಗೆಸ್ಟ್ ಲೈನ್ ಬಳಿ ಡಾ. ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆ

ಆನೇಕಲ್ ತಾಲೂಕಿನ ಅತ್ತಿಬೆಲೆ ಸಮೀಪವಿರುವ ಗೆಸ್ಟ್ ಲೈನ್ ಬಳಿ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ರವರ 134ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು

ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಸಲ್ಲಿಸಿ ಬಾಬಾ ಸಾಹೇಬರ ತ್ಯಾಗ ಹಾಗೂ ಹೋರಾಟಗಳ ಕುರಿತು ನುಡಿ ನಮನ ಸಲ್ಲಿಸಲಾಯಿತು.

ಕಾರ್ಯಕ್ರಮದ ಕುರಿತು ಮಾತನಾಡಿದ ಕನ್ನಡ ಜಾಗೃತಿ ವೇದಿಕೆಯ ಯುವ ಘಟಕದ ರಾಜ್ಯಾಧ್ಯಕ್ಷ ಗೌರೀಶ್ ಅತ್ತಿಬೆಲೆ ಕೈಗಾರಿಕಾ ಪ್ರದೇಶಕ್ಕೆ ಹೊಂದಿಕೊಂಡಂತೆ ಇರುವ ಗೆಸ್ಟ್ ಲೈನ್ ಬಳಿ ಪ್ರತಿ ವರ್ಷ ಅಂಬೇಡ್ಕರ್ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುತ್ತದೆ. ಅಶೋಕ್ ಶ್ರೀನಿವಾಸ್ ಹಾಗೂ ರಾಜಣ್ಣ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಅಂಬೇಡ್ಕರ್ ರವರು ಸಮ ಸಮಾಜದ ನಿರ್ಮಾಣಕ್ಕಾಗಿ ತಮ್ಮ ಇಡೀ ಜೀವನವನ್ನೇ ಮುಡುಪಾಗಿಟ್ಟು ಸಂವಿಧಾನವನ್ನು ರಚನೆ ಮಾಡಿದ್ದಾರೆ. ಹೀಗಾಗಿ ಅವರ ಜಯಂತಿಯನ್ನ ಸಾಮಾಜಿಕ ಕಾರ್ಯಕ್ರಮಗಳ ಜೊತೆ ಇಂದು ಯಶಸ್ವಿಯಾಗಿ ನೆರವೇರಿಸಲಾಗಿದೆ ಎಂದರು

ನೆರಳೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ರಾಮಸ್ವಾಮಿ ಮಾತನಾಡಿ ಕಳೆದ 30 ವರ್ಷಗಳಿಂದ ಗೆಸ್ಟ್ ಲೈನ್ ಬಳಿ ಅಂಬೇಡ್ಕರ್ ಜಯಂತಿ ಆಚರಣೆ ಮಾಡಲಾಗುತ್ತಿದೆ. ಕೈಗಾರಿಕಾ ಪ್ರದೇಶದ ಕಾರ್ಮಿಕರು ಹಾಗೂ ಸಾರ್ವಜನಿಕರ ಸಹಯೋಗದಲ್ಲಿ ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಅಂಬೇಡ್ಕರ್ ಅವರಿಗೆ ಗೌರವ ಸಮರ್ಪಣೆ ಮಾಡಲಾಗಿದೆ. ಅಂಬೇಡ್ಕರ್ ರವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲ ನಡೆಯುವ ಕೆಲಸ ಮಾಡಬೇಕು ಎಂದು ತಿಳಿಸಿದರು

ಆಯೋಜಕರಾದ ಶ್ರೀನಿವಾಸ್ ಮಾತನಾಡಿ ಪ್ರತಿ ವರ್ಷ ಅಂಬೇಡ್ಕರ್ ಜಯಂತಿಯನ್ನು ಹಬ್ಬದ ರೀತಿಯಲ್ಲಿ ಆಚರಣೆ ಮಾಡಲಾಗುತ್ತಿದೆ. ಅಂಬೇಡ್ಕರ್ ಅವರ ತತ್ವ ಆದರ್ಶಗಳು ಇಂದಿನ ಯುವ ಜನಾಂಗಕ್ಕೆ ಸ್ಪೂರ್ತಿಯಾಗಿದೆ ಎಂದರು.

Leave a Reply