Breaking
20 Sep 2026, Sun

ಬೇಗೂರಿನ ಐತಿಹಾಸಿಕ ಶ್ರೀ ನಾಗೇಶ್ವರ ಸ್ವಾಮಿ ದೇವಾಲಯದಲ್ಲಿ ಅದ್ದೂರಿ ಬ್ರಹ್ಮರಥೋತ್ಸವ

ಬೆಂ. ದಕ್ಷಿಣ ವಿಧಾನಸಭಾ ಕ್ಷೇತ್ರದ ಬೇಗೂರು ಸಮೀಪವಿರುವ ಐತಿಹಾಸಿಕ ಶ್ರೀ ನಾಗೇಶ್ವರ ಸ್ವಾಮಿ ದೇವಾಲಯದಲ್ಲಿ ಅದ್ದೂರಿ ಬ್ರಹ್ಮರಥೋತ್ಸವ ಇಂದು ಆಯೋಜಿಸಲಾಗಿತ್ತು.

ಅಲಂಕೃತ ರಥದಲ್ಲಿ ದೇವರನ್ನ ಕೂರಿಸಿ ಮುಖ್ಯರಸ್ತೆಗಳಲ್ಲಿ ಮೆರವಣಿಗೆ ಮಾಡಲಾಯಿತು. ಶಾಸಕ ಕೃಷ್ಣಪ್ಪ ರಥೋತ್ಸವಕ್ಕೆ ಚಾಲನೆ ನೀಡಿದರು.

ಸಾವಿರಾರು ಭಕ್ತಾದಿಗಳು ದೇವರ ರಥವನ್ನು ಎಳೆದು ತಮ್ಮ ಕೋರಿಕೆಗಳನ್ನ ಈಡೇರಿಸುವಂತೆ ಮನಸಾರೆ ಪ್ರಾರ್ಥಿಸಿದರು.

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply