Breaking
30 Mar 2026, Mon

ಹೊಂಗಸಂದ್ರದಲ್ಲಿ ಸೀತಾರಾಮ ಸಮೇತ ಶ್ರೀ ವೀರಾಂಜನೇಯ ಸ್ವಾಮಿಯ ಅದ್ದೂರಿ ಬ್ರಹ್ಮರಥೋತ್ಸವ

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಹೊಂಗಸಂದ್ರ ಗ್ರಾಮದಲ್ಲಿ ಸೀತಾರಾಮ ಸಮೇತ ಶ್ರೀ ವೀರಾಂಜನೇಯ ಸ್ವಾಮಿಯ ಅದ್ದೂರಿ ಬ್ರಹ್ಮರಥೋತ್ಸವ ಇಂದು ವಿಜೃಂಭಣೆಯಿಂದ ನೆರವೇರಿತು.

ಶಾಸಕರಾದ ಸತೀಶ್‌ ರೆಡ್ಡಿ ಬ್ರಹ್ಮ ರಥೋತ್ಸವಕ್ಕೆ ಚಾಲನೆ ನೀಡಿದರು. ಅಲಂಕೃತ ರಥದಲ್ಲಿ ದೇವರ ಮೂರ್ತಿಯನ್ನ ಕೂರಿಸಿ

ಊರಿನ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಯಿತು.

ಸಾವಿರಾರು ಭಕ್ತಾದಿಗಳು ರಥವನ್ನು ಎಳೆದು ತಮ್ಮ ಕೋರಿಕೆಗಳನ್ನ ಈಡೇರಿಸುವಂತೆ ದೇವರಲ್ಲಿ ಪ್ರಾರ್ಥಿಸಿದರು. ಬಂದಿದ್ದ ಭಕ್ತಾದಿಗಳಿಗೆ ಪಾನಕ, ಮಜ್ಜಿಗೆ ಸೇರಿದಂತೆ ಅನ್ನದಾಸೋಹ ಕಾರ್ಯಕ್ರಮ ನೆರವೇರಿಸಲಾಯಿತು

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply