Breaking
10 Feb 2026, Tue

ಜಿಗಣಿಯ ಲಿಂಕ್ ರಸ್ತೆಯಲ್ಲಿ ನಿಯಂತ್ರಣ ಕಳೆದುಕೊಂಡು ಬೇಕರಿಗೆ ಡಿಕ್ಕಿ ಹೊಡೆದ ಬಿಎಂಟಿಸಿ ಬಸ್

ಆನೇಕಲ್‌ ತಾಲೂಕಿನ ಜಿಗಣಿಯ ಲಿಂಕ್ ರಸ್ತೆಯಲ್ಲಿ ವೇಗವಾಗಿ ಬಂದ ಬಿಎಂಟಿಸಿ ಬಸ್ ನಿಯಂತ್ರಣ ಕಳೆದುಕೊಂಡು ಬೇಕರಿಗೆ ಡಿಕ್ಕಿ ಹೊಡೆದಿದೆ, ಪರಿಣಾಮ ಬಸ್‌ ನಲ್ಲಿದ್ದ ಕೆಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.

ಜಿಗಣಿಯಿಂದ ಬನ್ನೇರುಘಟ್ಟ ಮಾರ್ಗವಾಗಿ ಹೋಗುತ್ತಿದ್ದ ಎಲೆಕ್ನಿಕ್ ಬಿಎಂಟಿಸಿ ಬಸ್‌ ಲಿಂಕ್ ರಸ್ತೆಯ ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡು ಬೇಕರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಚಾಲಕನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಜಿಗಣಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply