Breaking
20 Sep 2026, Sun

ಕಗಲೀಪುರ ಕಾಲೋನಿಯಲ್ಲಿ ನೂತನವಾಗಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ

ಯಶವಂತಪುರ ವಿಧಾನಸಭಾ ಕ್ಷೇತ್ರದ ಕಗಲಿಪುರ ಕಾಲೋನಿಯಲ್ಲಿ ನೂತನವಾಗಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಇಂದು ಚಾಲನೆ ನೀಡಲಾಗಿದೆ.

ಶಾಸಕ ಸೋಮಶೇಖ‌ರ್ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಸಮ್ಮುಖದಲ್ಲಿ ನೂತನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು.

ಕಗಲೀಪುರ ಕಾಲೋನಿಯಲ್ಲಿ ಕಳೆದ ಕೆಲವು ವರ್ಷಗಳಿಂದ ರಸ್ತೆ ಹಾಗೂ ಚರಂಡಿ ಸಮಸ್ಯೆಯಿಂದ ಸಾರ್ವಜನಿಕರಿಗೆ ಅನಾನುಕೂಲ ಉಂಟಾಗುತ್ತಿತ್ತು. ಹೀಗಾಗಿ ನೂತನವಾಗಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಮಾಡುವ ಕಾಮಗಾರಿಗೆ ಶಾಸಕರ ನೇತೃತ್ವದಲ್ಲಿ ಚಾಲನೆ ನೀಡಲಾಗಿದೆ

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply