ಆನೇಕಲ್ ತಾಲೂಕಿನ ಶಾಂತಿಪುರ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಚಂದ್ರಮೋಹನ್ ಇಂದು ಆಯ್ಕೆಯಾಗಿದ್ದಾರೆ.
ಪಂಚಾಯತಿ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು.
ಅಂತಿಮವಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಚಂದ್ರಮೋಹನ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ನೂತನ ಅಧ್ಯಕ್ಷರಿಗೆ ಪಂಚಾಯತಿ ಸದಸ್ಯರು ಹಾಗೂ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದರು. ತಮಗೆ ಮತ ನೀಡಿದ ಎಲ್ಲಾ ಪಂಚಾಯಿತಿ ಸದಸ್ಯರಿಗೆ ಚಂದ್ರಮೋಹನ್ ಧನ್ಯವಾದ ಅರ್ಪಿಸಿದರು
ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

